ಜಗದ್ಗುರು ಲಿಯೋರವರು ಪೋಲಂಡ್ ಪ್ರಧಾನಮಂತ್ರಿ ಡೊನಾಲ್ಡ್ ಟಸ್ಕ್ ರವರನ್ನು ಭೇಟಿಯಾಗಿ ಸ್ವಾಗತಿಸಿದರು.
ವ್ಯಾಟಿಕನ್ ವರದಿ
ಗುರುವಾರ ಬೆಳಿಗ್ಗೆ ಜಗದ್ಗುರು XIVನೇ ಲಿಯೋರವರು ವ್ಯಾಟಿಕನ್‌ನಲ್ಲಿ ಪೋಲಂಡ್ ಗಣರಾಜ್ಯದ ಪ್ರಧಾನಮಂತ್ರಿ ಡೊನಾಲ್ಡ್ ಟಸ್ಕ್ ರವರನ್ನು ಭೇಟಿ ಮಾಡಿ ಸ್ವಾಗತಿಸಿದರು.
ನಂತರ ಪ್ರಧಾನಮಂತ್ರಿಯವರು ವ್ಯಾಟಿಕನ್ ರಾಜ್ಯ ಕಾರ್ಯದರ್ಶಿ ಕಾರ್ಡಿನಲ್ ಪಿಯೆತ್ರೋ ಪ್ಯಾರೊಲಿನ್ ಹಾಗೂ ರಾಷ್ಟ್ರಗಳ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳೊಂದಿಗೆ ಸಂಬಂಧಗಳ ಕಾರ್ಯದರ್ಶಿ ಆರ್ಚ್‌ಬಿಷಪ್ ಪಾಲ್ ರಿಚರ್ಡ್ ಗ್ಯಾಲಘರ್ ರವರನ್ನು ರಾಜ್ಯ ಕಾರ್ಯದರ್ಶಿ ಕಚೇರಿಯಲ್ಲಿ ಭೇಟಿಯಾದರು.
ಜಗದ್ಗುರುಗಳ ಅಧಿಕಾರ ಸ್ಥಳದ ಪತ್ರಿಕಾ ಕಚೇರಿ ಪ್ರಕಟಿಸಿದ ಪ್ರಕಟಣೆಯ ಪ್ರಕಾರ, ರಾಜ್ಯ ಕಾರ್ಯದರ್ಶಿ ಕಚೇರಿಯಲ್ಲಿ ನಡೆದ ಮಾತುಕತೆಗಳು ಆತ್ಮೀಯ ವಾತಾವರಣದಲ್ಲಿ ನಡೆದಿದ್ದು, ಜಗದ್ಗುರುಗಳ ಅಧಿಕಾರ ಸ್ಥಳ ಮತ್ತು ಪೋಲಂಡ್ ನಡುವಿನ ಉತ್ತಮ ಸಂಬಂಧಗಳನ್ನು ಮೆಚ್ಚಿಕೊಳ್ಳಲಾಯಿತು.
ವ್ಯಾಟಿಕನ್ ಪ್ರಕಟಣೆಯಲ್ಲಿ, “ದೇಶದ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿ, ಹಾಗೆಯೇ ಸ್ಥಳೀಯ ಧರ್ಮ ಸಭೆ ಮತ್ತು ರಾಜ್ಯದ ನಡುವಿನ ಸಂಬಂಧಗಳು, ವಿಶೇಷವಾಗಿ ಶಿಕ್ಷಣ ಕ್ಷೇತ್ರ ಹಾಗೂ ನೈತಿಕ ವಿಷಯಗಳ ಕುರಿತು” ಚರ್ಚೆ ನಡೆಯಿತು ಎಂದು ತಿಳಿಸಲಾಯಿತು.
ಕೊನೆಯಲ್ಲಿ, ಪ್ರಸ್ತುತ ಅಂತರರಾಷ್ಟ್ರೀಯ ಪರಿಸ್ಥಿತಿಯ ಕುರಿತು, ವಿಶೇಷವಾಗಿ ಉಕ್ರೇನ್ ಸಂಘರ್ಷ ಹಾಗೂ ಯುರೋಪಿಯನ್ ಒಕ್ಕೂಟದೊಳಗಿನ ಪೋಲಂಡ್‌ನ ಪಾತ್ರದ ಕುರಿತು ಪರಸ್ಪರ ಅಭಿಪ್ರಾಯ ವಿನಿಮಯ ನಡೆಯಿತು ಎಂದು ಪ್ರಕಟಣೆ ತಿಳಿಸಿತು.
